Online News in ಕನ್ನಡ

ಹುಲ್ಲಹಳ್ಳಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

ನಂಜನಗೂಡು: ಹುಲ್ಲಹಳ್ಳಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನವಾಗಿ ನಿರ್ಮಾಣವಾಗುವ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ 1 ಕೋಟಿ ರೂ ವೆಚ್ಚದಲ್ಲಿ  ಶಾಸಕ ದರ್ಶನ್ ಧ್ರುವನಾರಾಯಣ್ ಶಂಕುಸ್ಥಾಪನೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಈ ಕಟ್ಟಡ ನಿರ್ಮಾಣದಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ವಾತಾವರಣ ಹಾಗೂ ಮೂಲಸೌಕರ್ಯ ಲಭ್ಯವಾಗಲಿದೆ. ನಮ್ಮ ಮಕ್ಕಳ ಭವಿಷ್ಯ ಬೆಳಕಾಗಲು, ಸಮಾಜದ ಪ್ರಗತಿ ವೇಗ ಪಡೆಯಲು ಈ ಕಟ್ಟಡವು ಮಹತ್ತರ ಆಧಾರವಾಗುತ್ತದೆ ಎಂಬ ವಿಶ್ವಾಸ ನನ್ನದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ, ಗ್ರಾಂಪಂ ಅಧ್ಯಕ್ಷರಾದ ದೇವಮ್ಮ, ಉಪಾಧ್ಯಕ್ಷ ಲೋಕೇಶ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಮಾರುತಿ, ಹುಲ್ಲಹಳ್ಳಿ ಬ್ಲಾಕ್ ಅಧ್ಯಕ್ಷ ಶ್ರೀಕಂಠ ನಾಯಕ, ಅನ್ಸರ್, ದೊರೆಸ್ವಾಮಿ ನಾಯಕ, ಅಭಿನಂದನ್ ಪಟೇಲ್, ಶಿವಾನಂಜ ನಾಯಕ, ಹಲ್ಲರೆ ಮಹದೇವು, ಮಲ್ಲೇಶ್, ಬಸವಣ್ಣ, ಚಂದನ್, ವಿಜಯ್ ಕುಮಾರ್, ಆದರ್ಶ್ ಸೇರಿದಂತೆ ಹಲವು ಮುಖಂಡರು ಗ್ರಾಮಸ್ಥರು ಉಪಸ್ಥಿತರಿದ್ದರು.

Call Now Button