Online News in ಕನ್ನಡ

2047ರ ವೇಳೆಗೆ ಭಾರತ ಬಲಿಷ್ಠ ರಾಷ್ಟ್ರವಾಗಲಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

ಜೆಎಸ್‌ಎಸ್‌ ಜಯಂತಿ ರಾಷ್ಟ್ರಪತಿ ದ್ರೌಪದಿ ಮರ‍್ಮು ಚಾಲನೆ
ಮಳವಳ್ಳಿ (ಮಂಡ್ಯ ) 2047ರ ವೇಳೆಗೆ ಭಾರತ ಜಗತ್ತಿನ ಬಲಿಷ್ಠ ರಾಷ್ಟ್ರವಾಗಿ ಹೊರ ಹೊಮ್ಮಲಿದ್ದು, ಇದಕ್ಕಾಗಿ ಇಂದಿನ ಯುವ ಪೀಳಿಗೆಗೆ ಆಧುನಿಕ ಶಿಕ್ಷಣದ ಜೊತೆಗೆ ನೈತಿಕ ಶಿಕ್ಷಣದ ಅಗತ್ಯವೂ ಇದೆ ಎಂದು ರಾಷ್ಟ್ರಪತಿ ದ್ರೌಪದಿ ಮರ‍್ಮು ಕರೆ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯುತ್ತಿರುವ ಶ್ರೀಮತ್ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚರ‍್ಯ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಮೋಗಿಗಳವರ ೧೦೬೬ನೇ ಜಯಂತಿ ಮಹೋತ್ಸವದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮರ‍್ಮು ಭಾಗವಹಿಸಿ ಚಾಲನೆ ನೀಡಿ ಮಾತನಾಡಿದರು.

ಭಾರತವು ಮುಂದಿನ 2047ರ ವೇಳೆಗೆ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮುವ ಹಾದಿಯಲ್ಲಿದ್ದು, ಆಧುನಿಕ ಶಿಕ್ಷಣದ ಜೊತೆಗೆ ನೈತಿಕ ಶಿಕ್ಷಣದ ಅಗತ್ಯವೂ ಇದೆ. ಈ ನಿಟ್ಟಿನಲ್ಲಿ ಸಮಾಜದ ಪ್ರಗತಿಯಲ್ಲಿ ಸುತ್ತೂರು ಮಠ ಬಹುದೊಡ್ಡ ಕೊಡುಗೆ ನೀಡಿದೆ. ಮಹಿಳಾ ಸಬಲೀಕರಣ ಮತ್ತು ಗ್ರಾಮೀಣಾಭಿವೃದ್ಧಿಯಲ್ಲೂ ಗಣನೀಯ ಸೇವೆ ಸಲ್ಲಿಸಿದೆ ಎಂದು ಶ್ಲಾಘಿಸಿದರು.
ಜಗತ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳು ಆಧ್ಯಾತ್ಮ ಮತ್ತು ಧರ‍್ಮಿಕ ಸೇವೆಯ ಮೂಲಕ ಶಿಕ್ಷಣ, ಆರೋಗ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಬಹುದೊಡ್ಡ ಕೊಡುಗೆಯನ್ನು ನೀಡಿದ್ದರು. ಅವರ ಶಿಸ್ತು ಬದ್ಧ ಜೀವನ ಮತ್ತು ಅನುಸರಿಸಿದ ಮರ‍್ಗ ನಮಗೆಲ್ಲ ಆರ‍್ಶ ಎಂದು ನುಡಿದರು.
ಇದಕ್ಕು ಮುನ್ನ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಷ್ಟ್ರಪತಿ ದ್ರೌಪದಿ ಮರ‍್ಮು ಅವರನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಬೃಹತ್‌ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್‌ ಸ್ವಾಗತಿಸಿದರು. ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಜಿ, ಪೊಲೀಸ್‌ ಆಯುಕ್ತರಾದ ಸೀಮಾ ಲಾಟ್ಕರ್‌ ಹಾಜರಿದ್ದರು. ನಂತರ ವಾಯುಸೇನೆಯ ವಿಮಾನದಲ್ಲಿ ಮಳವಳ್ಳಿ ತಲುಪಿದರು.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.‌ ಚಲುವರಾಯಸ್ವಾಮಿ ಮತ್ತು ಜಿಲ್ಲಾಧಿಕಾರಿ ಕುಮಾರ್‌ ಅವರು ರಾಷ್ಟ್ರಪತಿಗಳನ್ನು ಬರಮಾಡಿಕೊಂಡರು. ನಂತರ ನಡೆದ ವೇದಿಕೆ ಕರ‍್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಶಾಸಕ ನರೇಂದ್ರ ಸ್ವಾಮಿ ಸೇರಿದಂತೆ ಅನೇಕ ಮಠಾಧಿಪತಿಗಳು ಭಾಗವಹಿಸಿದ್ದರು.
ಇದಕ್ಕು ಮುನ್ನ ಬೆಳಗ್ಗೆ ಧ್ವಜಾರೋಹಣ ಮತ್ತು ಮಹನೀಯರ ಹೆಸರಿನಲ್ಲಿ ದ್ವಾರಗಳ ಉದ್ಘಾಟನೆ ನಡೆಯಿತು. ರಾಷ್ಟ್ರಪತಿಗಳ ಆಗಮನದ ಹಿನ್ನಲ್ಲೆಯಲ್ಲಿ ಮಳವಳ್ಳಿ ಪಟ್ಟಣ ಮದುವಣಗಿತ್ತಿಯಂತೆ ಕಂಗೋಳಿಸುತ್ತಿದ್ದು, ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

Call Now Button