Online News in ಕನ್ನಡ

ಮೈಸೂರು ಜಿಲ್ಲೆಯಲ್ಲಿ ಜೆಡಿಎಸ್‌ ಬಲವರ್ಧನೆಗೆ ʻಜನರೊಂದಿಗೆ ಜನತಾದಳʼ ಕಾರ್ಯಕ್ರಮ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಜಾತ್ಯಾತಿತ ಜನತಾದಳ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ʻಜನರೊಂದಿಗೆ ಜನತಾದಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಇಂದು ನಗರದ ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗೋಷ್ಟಿ ನಡೆಸಿದ ಜೆಡಿಎಸ್‌ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಅಶ್ವಿನ್‌ ಕುಮಾರ್‌, ಮಾಜಿ ಸಚಿವ ಸಾ.ರಾ.ಮಹೇಶ್‌ ಸೇರಿದಂತೆ ಪ್ರಮುಖ ಪ್ರಮುಖ ಜೆಡಿಎಸ್‌ ನಾಯಕರು, ಕಾರ್ಯಕ್ರಮದ ಉದ್ದೇಶ ಮತ್ತು ಮಾಹಿತಿಯನ್ನು ಒದಗಿಸಿದರು.

ಫೆ.18ರಂದು ಪಿರಿಯಾಪಟ್ಟಣದಲ್ಲಿ ಜೆಡಿಎಸ್‌ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಫೆ.22ಕ್ಕೆ ಕೆ.ಆರ್.ನಗರದಲ್ಲಿ ಕಾರ್ಯಕರ್ತರೊಂದಿಗೆ ಸಮಾವಲೋಚನೆ ನಡೆಯಲಿದೆ. ಫೆ.24ಕ್ಕೆ ಬನ್ನೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ ಜರುಗಲಿದ್ದು ಫೆ.25ಕ್ಕೆ ಹುಣಸೂರು ತಾಲೂಕಿನಲ್ಲಿ ನಡೆಯಲಿದೆ. ಈ ಎಲ್ಲ ಸಭೆ -ಕಾರ್ಯಕ್ರಮಗಳಿಗೆ ನಿಖಿಲ್‌ ಕುಮಾರಸ್ವಾಮಿ ಆಗಮಿಸಲಿದ್ದಾರೆ. 2028ಕ್ಕೆ ನಡೆಯುವ ರಾಜ್ಯ ಸಾರ್ವತ್ರಿಕ ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿ  ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಿದೆ ಎಂದು ನಾಯಕರು ತಿಳಿಸಿದರು.

ಕಾಂಗ್ರೆಸ್‌ ಶಾಸಕರು ವಿದೇಶ ಪ್ರವಾಸ ಕೈಗೊಂಡಿರುವ  ಬಗ್ಗೆ ಮಾತನಾಡಿದ ಮಾಜಿ ಸಚಿವ ಸಾ.ರಾ.ಮಹೇಶ್‌, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಷಯದಲ್ಲಿ ಎಬ್ಬಿರುವ ಅಸಮಾಧಾನವನ್ನು  ಸರಿದೂಗಿಸಿ, ಶಾಸಕರನ್ನು ಸಮಾಧಾನ ಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರವಾಸ ಭಾಗ್ಯ ಕೈಗೊಂಡಿದ್ದಾರೆ ಎಂದು ಟೀಕಿಸಿದರು.

 

Call Now Button