Online News in ಕನ್ನಡ

ಮೋದಿ ಜನ್ಮ ದಿನ; ನಂಜನಗೂಡಲ್ಲಿ ಅಭಿಮಾನಿಗಳಿಂದ ಕುಸ್ತಿ ಆಯೋಜನೆ

ನಂಜನಗೂಡು: ಇಲ್ಲಿನ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ನೆನಪಿಗಾಗಿ ಅಭಿಮಾನಿಗಳು ಆಯೋಜಿಸಿದ್ದ ಪರಂಪರೆಯ ನಾಡ ಕುಸ್ತಿ ಪಂದ್ಯಾವಳಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಮಾಡಿದರು.
ಈ ವೇಳೆ ಮಾತನಾಡಿದ ಅವರು, ಕುಸ್ತಿ ಕರುನಾಡಿನ ಗಂಡುಮೆಟ್ಟಿನ ಕ್ರೀಡೆ, ಈ ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ, ಭಾರತೀಯ ಸಂಸ್ಕೃತಿ, ಪರಂಪರೆಯ ಕೊಂಡಿಯಾಗಿರುವ ಕುಸ್ತಿಯನ್ನು ಬೆಳೆಸುಳಿಸಲು ಗರಡಿ ಮನೆಗಳ ಜೀರ್ಣೋದ್ಧಾರ, ಕುಸ್ತಿ ಪಟುಗಳನ್ನು ಉತ್ತೇಜಿಸುವುದು ಆದ್ಯತೆಯಾಗಿ ಪರಿಗಣಿಸಬೇಕಿದೆ. ಈ ನಿಟ್ಟಿನಲ್ಲಿ ಕ್ರೀಡಾ ಇಲಾಖೆ ವಿಶೇಷ ಕಾಳಜಿ ವಹಿಸಬೇಕೆಂದು ಕರೆ ನೀಡಿದರು.
ಪ್ರಧಾನಿ ಮೋದಿ ಅವರ ಹೆಸರಿನಲ್ಲಿ ಪರಂಪರೆಯ ಹೆಮ್ಮೆಯ ಕೊಂಡಿಯಾಗಿರುವ ಕುಸ್ತಿ ಕ್ರೀಡೆಯನ್ನು ಆಯೋಜಿಸುವ ಮೂಲಕ ಯುವಜನರನ್ನು ಪ್ರೇರೇಪಿಸುವ ಕಾರ್ಯಕ್ರಮ ರೂಪಿಸಿರುವುದು ಅತ್ಯಂತ ಅರ್ಥಪೂರ್ಣವಾಗಿತ್ತು ಎಂದು ಇದೇ ವೇಳೆ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಆರ್.ರಘು ಕೌಟಿಲ್ಯ, ರಾಜ್ಯ ಕಾರ್ಯದರ್ಶಿಗಳಾದ ಶರಣು ತಳ್ಳಿಕೇರಿ, ಮಾಜಿ ಶಾಸಕ ಎಲ್.ನಾಗೇಂದ್ರ, ಹರ್ಷವರ್ಧನ್ ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು.
Call Now Button