Online News in ಕನ್ನಡ

ಮೈಸೂರಲ್ಲಿ ಇಂದಿರಾ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸಿಎಂ-ಡಿಸಿಎಂ ಶಂಕುಸ್ಥಾಪನೆ

ಮೈಸೂರು, ಆ.9- ಮೈಸೂರು ಜಿಲ್ಲಾ ಕಾಂಗ್ರೆಸ್ ನೂತನ ಕಟ್ಟಡ “ಇಂದಿರಾಗಾಂಧಿ ಕಾಂಗ್ರೆಸ್ ಭವನ”ದ ಶಂಕುಸ್ಥಾಪನೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಶನಿವಾರ ನೆರವೇರಿಸಿದರು. ಸಚಿವರಾದ ಎಚ್ ಸಿ ಮಹದೇವಪ್ಪ, ವೆಂಕಟೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್ ಎಂ ರೇವಣ್ಣ, ಉಪಾಧ್ಯಕ್ಷೆ ಪುಷ್ಪ ಅಮರನಾಥ್, ಶಾಸಕರಾದ ತನ್ವಿರ್ ಸೇಠ್, ಹರೀಶ್ ಗೌಡ, ದರ್ಶನ್ ದೃವನಾರಾಯಣ್, ರವಿಶಂಕರ್, ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಂಸದ ವಿ ಎಸ್ ಉಗ್ರಪ್ಪ, ಮಾಜಿ ಶಾಸಕ ಸೋಮಶೇಖರ್, ಜಿಲ್ಲಾ ಮುಖಂಡರಾದ ಆರ್ ಮೂರ್ತಿ, ವಿಜಯಕುಮಾರ್, ಶಿವಣ್ಣ, ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಮತ್ತಿತರರು ಉಪಸ್ಥಿತರಿದ್ದರು.

Call Now Button