Online News in ಕನ್ನಡ

ಮನರೇಗಾ ಮರು ಸ್ಥಾಪನೆಗೆ ಆಗ್ರಹಿಸಿ ನಂಜನಗೂಡಿನಲ್ಲಿ ಕೈ ಬೃಹತ್‌ ಪಾದಯಾತ್ರೆ

ನಂಜನಗೂಡು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿಬಿ-ರಾಮ್-ಜಿ ಕಾಯ್ದೆ ರದ್ದು ಮಾಡುವುದು ಮಾತ್ರವಲ್ಲದೆ, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ(ಮನರೇಗಾ) ಯೋಜನೆಯನ್ನು ಮರಳಿ ತರುವಂತೆ ಒತ್ತಾಯಿಸಿ ನಂಜನಗೂಡಿನಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು.


ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಮೈಸೂರು ಜಿಲ್ಲಾಹಾಗು ನಂಜನಗೂಡು ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಮರಳಿ ತರಲು ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ನಂಜನಗೂಡಿನ ನಗರಸಭಾ ಆವರಣದಲ್ಲಿರುವ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಎಂ.ಜಿ ರಸ್ತೆಯ ಮೂಲಕ ಹುಲ್ಲಹಳ್ಳಿ ವೃತ್ತದಿಂದ ತಾಲ್ಲೂಕು ಆಡಳಿತ ಭವನದ ವರೆಗೆ ಬೃಹತ್ ಪಾದಯಾತ್ರೆ ನಡೆಸಲಾಯಿತು.
ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಜಮಾಯಿಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ವಿಬಿ-ರಾಮ್-ಜಿ ಕಾಯ್ದೆ ರದ್ದು ಮಾಡಬೇಕು. ಮನರೇಗಾ ಯೋಜನೆಯನ್ನು ಮರಳಿ ಜಾರಿಗೆ ತರಬೇಕು ಎಂದು ಕೇಂದ್ರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಬಳಿಕ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಕೇಂದ್ರ ಸರ್ಕಾರದ ಐತಿಹಾಸಿಕ ಕಾಯ್ದೆ ಯಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ರದ್ದುಗೊಳಿಸಿ, ವಿಬಿ ರಾಮ್ ಜಿ ಕಾಯಿದೆಯನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಗ್ರಾಮೀಣ ಪ್ರದೇಶದ ಜನರ ಜೀವನಾಡಿಯಾಗಿದ್ದ ಮನರೇಗಾ ಉಳಿವಿಗಾಗಿ ಕಾಂಗ್ರೆಸ್ ರಾಜ್ಯದಲ್ಲಿ ಪ್ರತಿಭಟಿಸುತ್ತಿದೆ. ವಿಬಿ ರಾಮ್ ಜಿ ಕಾಯ್ದೆಯನ್ನು ವಿರೋಧಿಸುತಿದ್ದೇವೆ. ಗ್ರಾಮೀಣ‌ ಜನರ ಬದುಕನ್ನು ಅವರ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದಾರೆ. ಮಹಾತ್ಮ ಗಾಂಧೀಜಿಯವರ ಕನಸನ್ನು ಭಗ್ನಗೊಳಿಸುತ್ತಿದ್ದಾರೆ. ಬದುಕುವ ಹಕ್ಕು, ದುಡಿಯುವ ಹಕ್ಕನ್ನು ಕಾಂಗ್ರೆಸ್ ಸರ್ಕಾರ ನೀಡಿದ್ದು. ಅದರಂತೆ ಮನರೇಗಾ ಯೋಜನೆಯಿಂದ ಸಮಾನತೆಯನ್ನು ಕಲ್ಪಿಸಲಾಗಿತ್ತು. ಸಮಾನ ವೇತನ ನೀಡುವ ಸಲುವಾಗಿ ಅಂದು ಪ್ರಧಾನಮಂತ್ರಿಯಾಗಿದ್ದ ಮನಮೋಹನ ಸಿಂಗ್ ರವರು ಈ ಕಾಯ್ದೆಯನ್ನು ಜಾರಿಗೆ ತಂದಿದ್ದರು. ಆದರೆ, ಈಗಿನ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಇದನ್ನು ಬದಲಾಯಿಸಿ ವಿಬಿ ರಾಮ್ ಜಿ ಕಾಯಿದೆ ಮಾಡಿರುವುದು ಖಂಡನೀಯ. ಇದು ಸಂವಿಧಾನಕ್ಕೆ ವಿರುದ್ಧವಾಗಿ ಈ ಕಾಯ್ದೆಯನ್ನು ಮಾಡಿದ್ದಾರೆ. ಗಾಂಧೀಜಿಯವರ ಗ್ರಾಮ ಸ್ವರಾಜ್ ಯೋಜನೆಗೆ ವಿರುದ್ಧವಾಗಿದೆ. ಜನರಿಗೆ ತಪ್ಪು ಸಂದೇಶಗಳನ್ನು ನೀಡುತ್ತಿದ್ದಾರೆ. ಅದಕ್ಕಾಗಿ ನಾವು ಮನರೇಗಾ ಯೋಜನೆ ಮತ್ತು ವಿ.ಬಿ ರಾಮ್ ಜಿ ಕಾಯಿದೆಯ ಬಗ್ಗೆ ಜನರಿಗೆ ವ್ಯತ್ಯಾಸವನ್ನು ತಿಳಿಸುತ್ತಿದ್ದೇವೆ. ಕೂಡಲೇ ಕೇಂದ್ರ ಸರ್ಕಾರ ವಿ.ಬಿ ರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಯೋಜನೆಯನ್ನು ಮರು ಸ್ಥಾಪನೆ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿಜೆಪಿ ವಿಜಯ್ ಕುಮಾರ್ ಮಾತನಾಡಿ ಬಿಜೆಪಿ ನಡೆಯನ್ನು ಖಂಡಿಸಿದರು
ನಂತರ ತಹಶೀಲ್ದಾರ್ ಡಾ.ಸ್ಮಿತಾ ರಾಮು ರವರ ಮೂಲಕ ರಾಷ್ಟ್ರಪತಿ ರವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಇಂಧನ್ ಬಾಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ. ಎಂ ಶಂಕರ್, ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠ ನಾಯಕ, ಮಹಿಳಾ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ. ಮಾರುತಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಚಂದನ್ ಗೌಡ, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್, ಎಸ್.ಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಪ್ಪನಹಳ್ಳಿ ಶಿವಣ್ಣ, ಬಗರ್ ಹುಕುಂ ಸಮಿತಿಯ ಸದಸ್ಯೆ ಜಯಮಾಲಾ ಬೀರೇಗೌಡ, ನಗರಸಭಾ ಮಾಜಿ ಅಧ್ಯಕ್ಷ ಶ್ರೀಕಂಠಸ್ವಾಮಿ, ವಕೀಲರಾದ ನಾಗರಾಜಯ್ಯ, ವೇದ ಶಾಂತರಾಜು, ಮುಖಂಡರುಗಳಾದ ಶ್ರೀಧರ್, ಗೋವಿಂದರಾಜು ನಾಗೇಶ್ ರಾಜ್, ನಂಜಮಣಿ ಗುರುಮಲ್ಲಪ್ಪ ಶಶಿರೇಕಾ, ಜಮುನಾ, ವಾಣಿ, ದೊರೆಸ್ವಾಮಿ ನಾಯಕ, ಮಹೇಂದ್ರ, ಸೋಮೇಶ್, ಮಂಜುನಾಥ್, ಮಹದೇವಸ್ವಾಮಿ, ಎಸ್ ಜಗದೀಶ್, ಡಿ. ಆರ್ ರಾಜು, ದೇವರಾಜ್, ಸ್ವಾಮಿ, ಸುಂದರ್ ರಾಜ್, ರಾಚಪ್ಪ, ಎಂ.ಡಿ ಬಾಲರಾಜು, ಸೌಭಾಗ್ಯ, ಅಕ್ಬರ್ ಮಹಮದ್ ಅಲಿಮ್, ಅಬ್ದುಲ್ ಖಾದಿರ್, ಮುನಾವರ್ ಸಿದ್ದಿಕಿ, ಗಾಯತ್ರಿ , ಮುದ್ದು ಮಾದಶೆಟ್ಟಿ, ಕಳಲೆ ರಾಜೇಶ್, ಹೆಚ್ ಡಿ ಕೋಟೆ ಸೋಮೇಶ್, ಹುಲ್ಲಹಳ್ಳಿ ಮಾದಪ್ಪ, ಅನ್ಸರ್ ಅಹ್ಮದ್ ಜಬಿವುಲ್ಲಾ, ಯಡಿಯಾಲ ಗೋವಿಂದರಾಜು, ಹುಚ್ಚೆ ಗೌಡ, ದೇಬೂರು ಅಶೋಕ್, ಗಿರೀಶ್, ಪಿ. ಶ್ರೀನಿವಾಸ್, ಗಣೇಶ್ ಅಕ್ಮಲ್, ನಾಜೀರ್ ಖಾನ್, ಅಜ್ಗರ್ ಸೇರದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Call Now Button