Online News in ಕನ್ನಡ

ಮಿನಿಸ್ಟರ್‌ ಡಾ. ಯತೀಂದ್ರ ಸಿದ್ದರಾಮಯ್ಯ…ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ

ಬೆಂಗಳೂರು: ತಂದೆಯ ಆಡಳಿತದಲ್ಲಿ ಹೆಗಲು ಕೊಟ್ಟು, ನಿರಂತರ ಜನರೊಂದಿಗೆ ಬೆರೆತು, ಮೈಸೂರು ಜಿಲ್ಲೆಯ ಅಭಿವೃದ್ಧಿಗೆ ಅವಿರತ ದುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಈಗ ಮಿನಿಸ್ಟರ್.‌
ತಮ್ಮ ತಂದೆ ಐದು ವರ್ಷ ಮುಖ್ಯಮಂತ್ರಿಯಾಗಬೇಕಂದು ಬಲವಾಗಿ ಪ್ರತಿಪಾದಿಸುತ್ತಾ ಎದುರಾಳಿಗಳ ಕೆಂಗಣ್ಣಿಗೆ ಗುರಿಯಾಗುತ್ತಿದ್ದ ಡಾ. ಯತೀಂದ್ರ ಅವರು ಇದೀಗ ಕ್ಯಾಬಿನೆಟ್‌ ದರ್ಜೆಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ವಿಶೇಷವೆಂದರೆ, ಡಾ. ಯತೀಂದ್ರ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ತಂದೆಯ ರಾಜಕೀಯ ಸಿದ್ಧಾಂತರ ಮುಂದುವರೆಗೆ ಅಧ್ಯಾಯವೆಂಬಂತೆ ಬಿಂಬಿತರಾದರು. ಇದೀಗ ಮೈಸೂರು ಜಿಲ್ಲಾ ಉಸ್ತುವಾರಿಯೂ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಮೇಲೆ ಬೀಳಲಿದೆ.
ನಾಯಕತ್ವ ಬದಲಾವಣೆಯ ಬಗ್ಗೆ ಎಷ್ಟೇ ಚರ್ಚೆಗಳು ನಡೆದರೂ, ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟುಕೊಟ್ಟ ರೀತಿ ಮತ್ತು ನಡೆದುಕೊಂಡ ರೀತಿಯ ಬಗ್ಗೆ ರಾಜ್ಯವ್ಯಾಪಿ ಮೆಚ್ಚುಗೆ ವ್ಯಕ್ತವಾಗಿದ್ದು, ಸಿದ್ದರಾಮಯ್ಯ ಅವರ ನುಡಿದಂತೆ ನಡೆಯುವ ವ್ಯಕ್ತಿತ್ವಕ್ಕೆ ಇನ್ನಷ್ಟು ಮೆರಗು ಬಂದಿದೆ. ಈ ಹಿನ್ನಲ್ಲೆಯಲ್ಲಿ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಉಪ ಮುಖ್ಯಮಂತ್ರಿ ಅಥವಾ ಮಂತ್ರಿ ಮಾಡಲೇಬೇಕೆಂಬ ಕೂಗು ಮೈಸೂರು ಮಾತ್ರವಲ್ಲ, ರಾಜ್ಯದ ನಾನಾ ಭಾಗದಲ್ಲಿ ಕೇಳಿಬಂದಿತ್ತು.

Call Now Button