ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ಹಾಕಿದ್ದ ಲೋಕಾಯುಕ್ತ ಪೊಲೀಸರ ಕ್ರಮವನ್ನು ಜನಪ್ರತಿನಿಧಿಗಳ ನ್ಯಾಯಾಲಯ ಎತ್ತಿ ಹಿಡಿದಿದೆ. ಆಮೂಲಕ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾವಮೈದುನ ಮಲ್ಲಿಕಾರ್ಜುನ ಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಬಾಮೈದ ಮಲ್ಲಿಕಾರ್ಜುನ ವಿರುದ್ಧ ಅಕ್ರಮ ನಿವೇಶನ ಹೊಂದಿರುವ ಬಗ್ಗೆ ದೂರು ಆಧರಿಸಿ ವಿಚಾರಣೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಹಾಕಿದ್ದರು. ಇದನ್ನು ಪ್ರಶ್ನಿಸಿ ಜನಪ್ರತಿನಿಧಿಗಳ ನ್ಯಾಯಾಲಯದ ಮೊರೆ ಹೋಗಲಾಗಿತ್ತು. ಆದರೆ, ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಅನ್ನು ಜನ ಪ್ರತಿನಿಧಿಗಳ ನ್ಯಾಯಾಲಯ ಪುರಸ್ಕರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿ ಅವರಿಗೆ ಕ್ಲೀನ್ ಕಿಟ್ ನೀಡಿದೆ.
ಇದರಿಂದ ಸಿಎಂ ಸಿದ್ದರಾಮಯ್ಯ ಅವರ ಮೇಲಿದ್ದ ಅಕ್ರಮ ನಿವೇಶನ ಹೊಂದಿರುವ ಕಳಂಕ ಸರಿದಂತ್ತಾಗಿದೆ.


