ಧಾರವಾಡದ ಯೋಗೇಶ್ಗೌಡ ಕೊಲೆ ಪ್ರಕರಣದಲ್ಲಿ ದೋಷಿಗಳಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮತ್ತು ಇತರರ
ಶಿಕ್ಷೆ ಪ್ರಮಾಣವನ್ನು ಪ್ರಕಟಿಸಬೇಕಿದ್ದ ನ್ಯಾ. ಗಜಾನನ ಭಟ್ ಶಿಕ್ಷೇ ಪ್ರಮಾಣ ಪ್ರಕಟಿಸುವ ಒಂದು ದಿನದ ಮೊದಲೇ ವರ್ಗಾವಣೆ ಗೊಂಡಿದ್ದಾರೆ
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ೧೯ ಮಂದಿ ದೋಷಿಗಳೆಂದು ತೀರ್ಪು ನೀಡಲಾಗಿದ್ದು, ನಾಳೆ ಶಿಕ್ಷೆ ಪ್ರಮಾಣ ಘೋಷಿಸಬೇಕಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ವರ್ಗಾವಣೆಗೊಂಡ ಗಜಾನನನ ಭಟ್ ಅವರನ್ನು ಬೆಂಗಳೂರಿನ ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರನ್ನಾಗಿ ನೇಮಕ ಮಾಡಿ ವರ್ಗಾಯಿಸಲಾಗಿದೆ. ನ್ಯಾ. ಭಟ್ ಸೇರಿದಂತೆ ರಾಜ್ಯ ವ್ಯಾಪಿ ೧೧೪ ಮಂದಿ ನ್ಯಾಯಾಧೀಶರನ್ನು ಏಕಕಾಲಕ್ಕೆ ವರ್ಗಾವಣೆ ಮಾಡಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಆದೇಶ ಹೊರಡಿಸಿದ್ದಾರೆ.
ಇದೀಗ ವರ್ಗಾವಣೆಯಿಂದ ಖಾಲಿಯಾಗಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಸ್ಥಾನಕ್ಕೆ ಮಂಡ್ಯದ ೧ನೇ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ಕೆ.ಬಿ. ಶಿವಪ್ರಸಾದ್ ಅವರನ್ನು ನೇಮಿಸಲಾಗಿದೆ.


