ಮೈಸೂರು: ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ಯುವರಾಜ ಇಂದು ಬೆಳಗ್ಗೆ ಮೃತಪಟ್ಟಿದೆ.
1987ರಲ್ಲಿ ಜರ್ಮನಿಯಿಂದ ತಂದ ಹೆನ್ರಿ ಮತ್ತು ಹನಿ ಜಿರಾಫೆಗಳಿಗೆ 9ನೇ ಮರಿಯಾಗಿ 2001ರ ಡಿಸೆಂಬರ್ 7ರಂದು ಜನಿಸಿದ ಯುವರಾಜ ಪ್ರವಾಸಿಗರ ಕೈ ಆರೈಕೆಯಲ್ಲಿ ಬೆಳೆದ ಹಾಗೂ ಮೃಗಾಲಯದಲ್ಲಿ ಹೆಚ್ಚು ವರ್ಷ ಅಂದರೆ 25 ವರ್ಷಗಳ ಕಾಲ ಬದುಕಿದ ಜಿರಾಫೆಯಾಗಿದೆ.
ಹನಿ ಮತ್ತು ಹೆನ್ರಿ ಜಿರಾಫೆಗಳಿಗೆ ಜನಿಸಿದ ಕೃಷ್ಣರಾಜ, ಚಾಮರಾಜ, ನರಸಿಂಹರಾಜ ಮತ್ತು ಯುವರಾಜ ಜಿರಾಫೆಗಳಲ್ಲಿ ಈವರೆಗೆ ಬದುಕಿದ ಜಿರಾಫೆ ಯುವರಾಜ ಜಿರಾಫೆಯಾಗಿದ್ದು, ಇದರ ಸಾವು ಮೃಗಾಲಯಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


