Online News in ಕನ್ನಡ

ನಂಜನಗೂಡು: ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿ

ಮೈಸೂರು: ನಂಜನಗೂಡಿನಲ್ಲಿ ಕಾಡು ಪ್ರಾಣಿಗಳ ಹಾವಳಿ ನಿಯಂತ್ರಣ ಮೀರುತ್ತಿದ್ದು, ಬೈಕ್‌ನಲ್ಲಿ ತೆರಳುತ್ತಿದ್ದ ಮಗು ಸೇರಿದಂತೆ ದಂಪತಿ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಜರುಗಿದೆ. ಘಟನೆಯಲ್ಲಿ ಮಗು, ತಂದೆ, ತಾಯಿ ಗಾಯಗೊಂಡಿದ್ದು ಇವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಲ್ಲಿನ ಚುಂಚನಹಳ್ಳಿ- ಕೋಣನೂರು ರಸ್ತೆ ಬಳಿ ಇರುವ ಜಮೀನಿಗೆ ಹೋಗುತ್ತಿದ್ದಾಗ ಚಿರತೆ ದಾಳಿ ನಡೆದಿದೆ. ಕಳೆದ ಕೆಲ ದಿನಗಳಿಂದ ಈ ಭಾಗದಲ್ಲಿ ಚಿರತೆ ಕಾಣಿಸಿಕೊಂಡು ಸಾಕು ಪ್ರಾಣಿಗಳನ್ನು ಕೊಂದು ಹಾಕಿತ್ತು. ಈ ಬಗ್ಗೆ ಅರಣ್ಯ ಇಲಾಖೆಯ ಗಮನಕ್ಕೂ ತರಲಾಗಿತ್ತು.
ಆದರೆ, ಕಳೆದ ರಾತ್ರಿ ಬೈಕ್‌ನಲ್ಲಿ ನಂಜುಂಡಸ್ವಾಮಿ ದಂಪತಿ ತೆರಳುವಾಗ ಚಿರತೆ ದಾಳಿ ಮಾಡಿದೆ. ಇದರಿಂದ ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಗ್ರಾಮಸ್ಥರು ಪ್ರತಿಕ್ರಿಯೆ ನೀಡಿ ಹಲವು ದಿನಗಳಿಂದ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ತಮ್ಮ ಜಮೀನು ಹೊಲಗಳಿಗೆ ತೆರಳು ಭಯ ಪಡುತ್ತಿದ್ದಾರೆ ಎಂದು ತಮ್ಮ ಅಳಲು ತೋಡಿಕೊಂಡರು.

Call Now Button