Online News in ಕನ್ನಡ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಬೆಳಗಾವಿ ಸುವರ್ಣಸೌಧದ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್‌ ಪ್ರತಿಭಟನೆ

ಬೆಳಗಾವಿ, ಡಿಸೆಂಬರ್ 17, 2025:  ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ‌ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ  ಸುವರ್ಣಸೌಧದ ಗಾಂಧಿ ಪ್ರತಿಮೆ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಶಾಸಕರು ಪ್ರತಿಭಟನೆ ನಡೆಸಿದರು.

ಕೋರ್ಟ್‌ ಹೇಳಿದ್ದೇನು ?

ಎಫ್‌ಐಆರ್‌ ಇಲ್ಲದೆ ಖಾಸಗಿ ದೂರಿನ ಆಧಾರದಲ್ಲಿ ಸಲ್ಲಿಸಿರುವ ಆರೋಪ ಪಟ್ಟಿಯನ್ನು ಪರಿಗಣಿಸಲು ಸಾಧ್ಯವಿಲ್ಲ. ಕಾನೂನಿನಡಿ ಇದನ್ನು ಅನುಮತಿಸಲಾಗದುʼ ಎಂದು ನ್ಯಾಯಾಧೀಶ ವಿಶಾಲ್‌ ಗೋಗ್ನೆ ಹೇಳಿದ್ದಾರೆ. ಪ್ರಕರಣದಲ್ಲಿ ದೆಹಲಿ ಪೊಲೀಸ್‌ನ ಆರ್ಥಿಕ ಅಪರಾಧಗಳ ತನಿಖಾ ವಿಭಾಗವು ಖಾಸಗಿ ವ್ಯಕ್ತಿಯೊಬ್ಬರ ದೂರಿನ ತನಿಖೆ ಆಧಾರದಲ್ಲಿ ಆರೋಪ ಪಟ್ಟಿ ಪರಿಗಣಿಸುವುದು ಅಪಕ್ವ ಎನಿಸುತ್ತದೆʼ ಎಂದಿದ್ದಾರೆ. ಈ ಮೊದಲು ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಸೇರಿದಂತೆ ಐವರ ಮೇಲೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಯಡಿ ಇಡಿ ಪ್ರಕರಣ ದಾಖಲಿಸಿಕೊಂಡು ಆರೋಪ ಪಟ್ಟಿಯನ್ನು ಕೋರ್ಟ್‌ಗೆ ಸಲ್ಲಿಸಿತ್ತು.

ʻ ನ್ಯಾಷನಲ್‌ ಹೆರಾಲ್ಡ್‌ ಕೋರ್ಟ್‌ ಕೇಸ್‌ನಲ್ಲಿ ಬಿಜೆಪಿ ಮಟಾಷ್‌ʼ, ʻವಿಕ್ಟರಿ ಟು ಯಂಗ್‌ ಇಂಡಿಯಾʼ, ʻಇಡಿ ಆಯ್ತಾ ಕೆಡಿ, ಬಿಜೆಪಿ ಮಾನಗೇಡಿʼ ಘೋಷಣೆಯ ನಾಮಫಲಗಳನ್ನು ಪ್ರದರ್ಶಿಸಿ ಬಿಜೆಪಿ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿದ ನಾಯಕರು, ಇಡಿ ವರದಿಯನ್ನು ಸಾರಾಸಗಟಾಗಿ ತಿರಸ್ಕರಿಸಿರುವ ಟ್ರಯಲ್‌ ಕೋರ್ಟ್‌ ತಿರಸ್ಕರಿಸಿರುವುದನ್ನು ಸ್ವಾಗತಿಸಲಾಯಿತು. ಇದು ಸತ್ಯಕ್ಕೆ ಸಂದ ಜಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್‌ಡಿಎ ಸರಕಾರವು  ಕೇಂದ್ರ ಸರಕಾರದ ಅಂಗ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ರಾಜಕೀಯ ಸೇಡಿಗೆ ಬಳಸಿಕೊಳ್ಳುತ್ತಿದೆ. ಇದಕ್ಕೆ ಸ್ಪಷ್ಟ ಉದಾಹರಣೆ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ.  ಪ್ರತಿಭಟನೆಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರಾದ ಬಿ.ಕೆ. ಹರಿಪ್ರಸಾದ್‌, ಹೆಚ್.ಕೆ. ಪಾಟೀಲ್‌, ಹ್ಯಾರಿಸ್‌, ಸಲೀಂ ಅಲಿ, ಪುಟ್ಟರಂಗಶೆಟ್ಟಿ, ಉಮಾಶ್ರೀ ಮೊದಲಾದವರು ಭಾಗವಹಿಸಿದ್ದರು.

 

 

 

Call Now Button