Online News in ಕನ್ನಡ

ಆರ್‌ ಒ ಬಿ ಮೇಲ್ಸೇತುವೆ ಸ್ಥಳ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ಸೋಮಣ್ಣ

ನಂಜನಗೂಡು: ನಗರದ ಆರ್. ಪಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗುವ ಆರ್.ಓ.ಬಿ. ಮೇಲ್ಸೇತುವೆ ಕಾಮಗಾರಿ ಸಂಬಂಧವಾಗಿ ರೈಲ್ವೆ ಸಚಿವ ವಿ. ಸೋಮಣ್ಣ ಅವರೊಂದಿಗೆ ಶಾಸಕ ದರ್ಶನ್ ಧ್ರುವನಾರಾಯಣ್, ಸಂಸದ ಸುನೀಲ್‌ ಬೋಸ್‌ ಅವರು ಸ್ಥಳ ಪರಿಶೀಲನೆ ನಡೆಸಿದರು.

ಕಾಮಗಾರಿ ನಡೆಯುವ ಸ್ಥಳಗಳನ್ನು ಮತ್ತು ಪ್ರಗತಿಯ ವಿವರಗಳನ್ನು ಈ ವೇಳೆ ವಿ. ಸೋಮಣ್ಣ ಪರಿಶೀಲಿಸಿದರು. ಜನಸಾಮಾನ್ಯರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಸೇತುವೆ ಕಾಮಗಾರಿಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳ್ಳುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಶಾಸಕ ದರ್ಶನ್‌ ಧ್ರುವನಾರಾಯಣ್‌ ಇದೇ ವೇಳೆ ಸಚಿವರಿಗೆ ಮನವಿ ಮಾಡಿದರು. ಸೇತುವೆ ನಿರ್ಮಾಣದಿಂದ ನಗರ ಸಂಚಾರ ವ್ಯವಸ್ಥೆ ಸುಗಮಗೊಳ್ಳುವುದರೊಂದಿಗೆ ದೀರ್ಘ ಕಾಲದ ಸಮಸ್ಯೆಗೆ ಶಾಸ್ವತ ಪರಿಹಾರ ಲಭ್ಯವಾದಂತೆ ಆಗಲಿದೆ.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀವತ್ಸ, ಎಂಎಲ್‌ ಸಿ ವಿವೇಕಾನಂದ, ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಹರ್ಷವರ್ಧನ್, ಬಾಲರಾಜ್, ಪ್ರತಾಪ್ ಸಿಂಹ, ನಗರಸಭಾ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ, ತಹಸೀಲ್ದಾರ್ ಶಿವಕುಮಾರ್ ಕಾಸನೂರ್ ಸೇರಿದಂತೆ ಹಲವು ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.

Call Now Button