Online News in ಕನ್ನಡ

ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ

ನವದೆಹಲಿ: ಪೋಕ್ಸೊ ಪ್ರಕರಣದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ. ಬೆಂಗಳೂರಿನ ಎಫ್‍ಟಿಎಸ್ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್ ಹಾಗೂ ವಿಚಾರಣಾ ಪ್ರಕ್ರಿಯೆಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ತಡೆಯಾಜ್ಞೆ ನೀಡಿದ್ದಾರೆ.
ಪ್ರಕರಣದ ಆರೋಪಿಗಳಾದ ಬಿ.ಎಸ್.ಯಡಿಯೂರಪ್ಪ, ವೈ.ಎಂ. ಅರುಣ, ಎಂ. ರುದ್ರೇಶ ಹಾಗೂ ಜಿ. ಮರಿಸ್ವಾಮಿ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದ ವಿಶೇಷ ಸೆಷನ್ಸ್ ನ್ಯಾಯಾಲಯವು ಡಿಸೆಂಬರ್ 2ರಂದು ಕೋರ್ಟ್‍ಗೆ ಖುದ್ದು ಹಾಜರಾಗುವಂತೆ ಆದೇಶಿಸಿತ್ತು.
ಈ ಸಂಬಂಧ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಅಶೋಕ್ ಎನ್. ನಾಯಕ್ ಪ್ರಸ್ತುತ ಪರಿಸಿದ ಅರ್ಜಿಯನ್ನು ಪುರಸ್ಕರಿಸಿದ ಬೆಂಗಳೂರಿನ ಎಫ್‍ಟಿಎಸ್ ವಿಶೇಷ ಕೋರ್ಟ್-1ರ ನ್ಯಾಯಾಧೀಶೆ ಸುಜಾತಾ ಅವರು 30 ದಿನಗಳ ಒಳಗಾಗಿ ಸಾಕ್ಷಿ ವಿಚಾರಣೆ ಆಗಬೇಕೆ ಎಂಬ ಕಾರಣಕ್ಕೆ ಸಮನ್ಸ್ ಜಾರಿಗೆ ಆದೇಶಿಸಿದ್ದರು.

Call Now Button