Online News in ಕನ್ನಡ

ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಮುಂದುವರಿದ ಪ್ರತಿಭಟನೆ

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಕನ್ನಡಾಂಬೆ ರಕ್ಷಣಾ ವೇದಿಕೆ ಕಾರ್ಯಕರ್ತರು, ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ರಾಜಕೀಯ ತೆವಲಿಗೋಸ್ಕರ ಯತೀಂದ್ರ ಸಿದ್ದರಾಮಯ್ಯ ಈ ರೀತಿ ಅವಹೇಳನದ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು. ಯತೀಂದ್ರ ಅವರು ನಾಲ್ವಡಿ ಕೃಷ್ಣರಾಜ ರಾಜ ಒಡೆಯರ್‌ ಅವರ ಕಾಲಿನ ಧೂಳಿಗೂ ಸಮ ಇಲ್ಲ. ವಿವಾದಾತ್ಮಕ ಹೇಳಿಕೆ ನೀಡಬೇಕು ಯತೀಂದ್ರ ಈ ಕೂಡಲೇ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಇರುತ್ತದೆ ಎಂದು ಎಚ್ಚರಿಕೆ ನೀಡಿದರು.

ಕನ್ನಡಾಂಬೆ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ರಾಜಶೇಖರ್ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Call Now Button