Online News in ಕನ್ನಡ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಡಿ.ಕೆ.ಶಿವಕುಮಾರ್ ಉತ್ತರಾಧಿಕಾರಿ

ಬೆಂಗಳೂರು: ಅಂತೂ ಇಂತೂ ಕುತೂಹಲಗಳಿಗೆ ತೆರೆಬಿದ್ದಿದ್ದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಅದರಂತೆ ಮಧ್ಯಾಹ್ನ 3 ಗಂಟೆಗೆ ಲೋಕ ಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ. ಇದರ ಬೆನ್ನ ಹಿಂದೆಯೇ ಮುಂದಿನ ಸರಕಾರವನ್ನು ಡಿ.ಕೆ.ಶಿವಕುಮಾರ್‌ ಮುನ್ನಡೆಸಲಿದ್ದಾರೆ ಎಂದೂ ಸಹ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.


ಇಂದು ತಮ್ಮ ನಿವಾಸದಲ್ಲಿ ಆಯೋಜಿಸಿದ್ದ ಶಾಸಕರೊಂದಿಗಿನ ಉಪಹಾರ ಕೂಟದಲ್ಲಿ ಈ ವಿಷಯ ಪ್ರಸ್ತಾಪಿಸಿರುವ ಸಿಎಂ ಸಿದ್ದರಾಮಯ್ಯ, ತಮ್ಮ ಮೂರು ವರ್ಷಗಳ ಆಡಳಿತದ ಬಗ್ಗೆ ತೃಪ್ತಿ ಇರುವುದಾಗಿ ಹೇಳಿದ್ದಾರೆ. ಬಡವರಿಗೆ ನೀಡಿರುವ ಎಲ್ಲ ಭರವಸೆಗಳನ್ನು ಈಡೇರಿಸಿದ್ದೇನೆ. ಎಷ್ಟೇ ಕಷ್ಟವಾದರೂ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದೇನೆ ಎಂದು ತಿಳಿಸಿದರು.
ಹೈಕಮಾಂಡ್‌ ಸೂಚನೆಯಂತೆ ನಾನು ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಇದಕ್ಕೆ ಎಲ್ಲರ ಸಹಕಾರ ಬೇಕು. ಮುಂದಿನ ದಿನಗಳಲ್ಲಿ ಡಿ.ಕೆ.ಶಿವಕುಮಾರ್‌ ನೇತೃತ್ವದ ಸರಕಾರಕ್ಕೆ ನಿಮ್ಮ ಬೆಂಬಲ ಸಹಕಾರ ನೀಡಬೇಕೆಂದು ಕೋರಿದರು. ಇದಕ್ಕೆ ಪ್ರತಿಯಾಗಿ ಸಿಎಂ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಮುಂದಿನ ಸರಕಾರ ರಚನೆಯಾಗಲಿದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.
ಸಚಿವ ಸಂಪುಟದ ಎಲ್ಲ ಹಿರಿಯ ಸಚಿವರು, ಶಾಸಕರು ಉಪಹಾರ ಕೂಟದಲ್ಲಿ ಭಾಗವಹಿಸಿದ್ದರು. ಉಪಹಾರ ಕೂಟಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶಿರ್ವಾದ ಪಡೆದರು. ನಂತರ ಪರಸ್ಪರ ನಾಯಕರು ಆಲಿಂಗನ ಮಾಡಿ ಒಗ್ಗಟ್ಟು ಪ್ರದರ್ಶಿಸಿದರು.

Call Now Button