Online News in ಕನ್ನಡ

ʻತಮಿಳುನಾಡಿಗೆ ನೀರಿಲ್ಲʼ : ಜನಸಂಪನ್ಮೂಲ ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ

ಮುತ್ತತ್ತಿ ಜಲಾಶಯಕ್ಕೆ ಭೇಟಿ ನೀಡಿದ ಸಚಿವರು
ಮಂಡ್ಯ: ನಾವು ಇದುವರೆಗೆ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿಲ್ಲ. ಸದ್ಯ ತಮಿಳುನಾಡಿಗೆ ಬಿಡಲು ನಮ್ಮ ಬಳಿ ನೀರು ಕೂಡ ಇಲ್ಲ. ಕುಡಿಯುವ ನೀರಿಗಾಗಿ ನಮ್ಮ ಮೊದಲ ಆದ್ಯತೆ ಇದೆ ಎಂದು ಸಚಿವ ರಾಮಲಿಂಗ ರೆಡ್ಡಿ ಎಂದು ತಿಳಿಸಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಕ್ಯಾತೆ ತೆಗೆಯುತ್ತಿರುವ ವಿಚಾರಕ್ಕೆ ಸಂಬಂಧ ಮಂಡ್ಯದ ಮುತ್ತತ್ತಿಯಲ್ಲಿ ಸಚಿವ ರಾಮಲಿಂಗ ರೆಡ್ಡಿ ಅವರು ಮಾತನಾಡಿದರು.
ಇಂದು ನಡೆಯಲಿರುವ ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ರಾಜ್ಯದ ಪರವಾಗಿ ವಾದ ಮಂಡಿಸಲಾಗುವುದು ಎಂದು ತಿಳಿಸಿರುವ ಸಚಿವರು, ಮಳೆ ಕೊರತೆಯ ಹಿನ್ನೆಲೆಯಲ್ಲಿ ಮೋಡ ಬಿತ್ತನೆಗೆ ನಿನ್ನೆ ಪ್ರಸ್ತಾವನೆ ಬಂದಿದ್ದು, ಅದರ ಬಗ್ಗೆ ಮುಂದೆ ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ.
ಮುತ್ತತ್ತಿಗೆ ಸಚಿವರು ಭೇಟಿ:
ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುತ್ತತ್ತಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಪ್ರವಾಸಿಗರ ಮುಳುಗಡೆ ಮತ್ತು ಸಾವು ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಜಲಸಂಪನ್ಮೂಲ ಸಚಿವ ರಾಮಲಿಂಗರೆಡ್ಡಿ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನಾ ಸ್ಥಳದಲ್ಲಿ ಅಧಿಕಾರಿ ಗಳೊಂದಿಗೆ ಸಭೆ ನಡೆಸಿ, ಭವಿಷ್ಯದಲ್ಲಿ ಇಂತಹ ದುರಂತಗಳು ಮರುಕಳಿಸ ದಂತೆ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಪ್ರವಾಸಿಗರ ಸುರಕ್ಷತೆಯನ್ನು ಖಾತ್ರಿ ಪಡಿಸಲು ಸ್ಥಳೀಯ ಶಾಸಕ ನರೇಂದ್ರಸ್ವಾಮಿ ಅವರ ಸಲಹೆಯಂತೆ ಸಚಿವರು ಹಲವು ಮಹತ್ವದ ನಿರ್ಧಾರ ಗಳನ್ನು ಪ್ರಕಟಿಸಿದ್ದಾರೆ. ಪ್ರವಾಸಿಗರು ಮತ್ತು ಭಕ್ತರು ನದಿಯಲ್ಲಿ ಸುರಕ್ಷಿತವಾಗಿ ಸ್ನಾನ ಮಾಡಲು ಋಷಿಕೇಶ ಹಾಗೂ ಹರಿದ್ವಾರದ ಮಾದರಿಯಲ್ಲಿ ವ್ಯವಸ್ಥಿತ ಕಾಲುವೆಗಳನ್ನು ನಿರ್ಮಿಸಲು ತೀರ್ಮಾನಿಸ ಲಾಗಿದೆ.ಇದಕ್ಕಾಗಿ ಶೀಘ್ರವೇ ಡಿಪಿಆರ್ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ಆಗ ಭಕ್ತರು ಅಲ್ಲಿಯೇ ಸ್ನಾನ ಮಾಡುವದು ನದಿಗೆ ಇಳಿಯುವ ಅವಶ್ಯಕತೆ ಇರುವುದಿಲ್ಲ ಎಂದರು
ನದಿ ತೀರ ಹಾಗೂ ಸೂಕ್ತ ಸ್ಥಳಗಳಲ್ಲಿ 20 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸ ಲಾಗುವುದು.ಜೊತೆಗೆ 8 ಜನ ಮಾರ್ಷಲ್‌ಗಳನ್ನು ಹಾಗೂ ಪೊಲೀಸ್ ಚೌಕಿಯನ್ನು ನಿರ್ಮಿಸಲಾಗುವುದು.ರಜಾ ದಿನಗಳಲ್ಲಿ ವಿಶೇಷ ಪೊಲೀಸ್ ಭದ್ರತೆಗಾಗಿ ಎಸ್‌ಪಿಗೆ ಸೂಚನೆ ನೀಡಲಾಗಿದೆ ಎಂದರು
ಪ್ರವಾಸಿ ತಾಣದಲ್ಲಿ ಶೌಚಾಲಯಗಳ ನಿರ್ಮಾಣ ಹಾಗೂ ಎಚ್ಚರಿಕೆ ನೀಡುವ ಸೂಚನಾ ಫಲಕಗಳನ್ನು ಸರಿಯಾಗಿ ಅಳವಡಿಸಲು ನಿರ್ದೇಶನ ನೀಡಲಾಗಿದೆ. ನದಿ ತೀರದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಗಳನ್ನು ಹಾಕದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು.
ಮೇಕೆದಾಟು ಅಣೆಕಟ್ಟು ನಿರ್ಮಾಣವಾದರೆ ಈ ಪ್ರದೇಶ ಮುಳುಗಡೆಯಾಗಲಿದೆ. ಆದರೆ, ಅದಕ್ಕೆ ಇನ್ನೂ ಹೆಚ್ಚಿನ ಸಮಯ ಬೇಕಾಗಿರುವುದ ರಿಂದ, ಅಷ್ಟರವರೆಗೆ ಪ್ರವಾಸಿಗರ ಸುರಕ್ಷತೆಗಾಗಿ ಈ ತಾತ್ಕಾಲಿಕ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಓ ಕೆ.ಆರ್.ನಂದಿನಿ, ಎಸ್ಪಿ ಡಾ.ವಿಜೆ ಶೋಭಾರಾಣಿ, ಕಾವೇರಿ ನೀರಾವರಿ ನಿಗಮ ವ್ಯವಸ್ಥಾಪಕ ನಿರ್ದೇಶಕ ಮಹೇಶ್,ಸೇರಿದಂತೆ ಇತರರು ಹಾಜರಿದ್ದರು.

 

Call Now Button