Online News in ಕನ್ನಡ

ನಂಜನಗೂಡಿನಲ್ಲಿ ಶಿಕ್ಷಕರ ದಿನಾಚರಣೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ನಂಜನಗೂಡು: ನಗರದ ಶ್ರೀ ಕಮಲಮ್ಮ ಗುರುಮಲ್ಲಪ್ಪ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ಗುರುವಂದನಾ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಶಾಸಕ ದರ್ಶನ್ ಧ್ರುವನಾರಾಯಣ್ ಪಾಲ್ಗೊಂಡು, ಸರ್ವಪಲ್ಲಿ ರಾಧಾಕೃಷ್ಣನ್ ಮತ್ತು ಸಾವಿತ್ರಿಬಾಯಿ ಫುಲೆ ಭಾವಚಿತ್ರಕ್ಕೆ ಪುಷ್ಪರ್ಚನೆ ಸಲ್ಲಿಸಿ, ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.

ಶಿಕ್ಷಕರು ಕೇವಲ ಪಾಠಗಳನ್ನು ಬೋಧಿಸುವವರಲ್ಲ, ಅವರು ಜೀವನ ಮೌಲ್ಯಗಳನ್ನು ಬೆಳೆಸಿ, ಸಮಾಜಕ್ಕೆ ಶ್ರೇಷ್ಠ ವ್ಯಕ್ತಿಗಳನ್ನು ನೀಡುವವರು. ನಮ್ಮ ಜೀವನಕ್ಕೆ ದಾರಿ ತೋರಿದ, ಜ್ಞಾನ ಮತ್ತು ಮೌಲ್ಯಗಳನ್ನು ತುಂಬಿದ ಗುರುಗಳಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನಸಭಾ ಪರಿಷತ್ ಸದಸ್ಯರಾದ ವಿವೇಕಾನಂದ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರಸಭಾ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ, ಶಿಕ್ಷಕರ ಸಂಘದ ಅಧ್ಯಕ್ಷರಾದ ಧರ್ಮ ರತ್ನಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ದೀಪು, ಸಿದ್ದರಾಜಪ್ಪ, ರಾಜಕುಮಾರ್, ಸೋಮೇಶ್, ಮಹೇಶ್, ನಗರ ಬ್ಲಾಕ್ ಅಧ್ಯಕ್ಷರಾದ ಸಿ. ಎಂ ಶಂಕರ್, ಬಾಲರಾಜ್, ನಗರಸಭಾ ಸದಸ್ಯರು, ಶಿಕ್ಷಕರ ವರ್ಗ ಉಪಸ್ಥಿತರಿದ್ದರು.

Call Now Button