ಬೆಳಗಾವಿ: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ʻನಾಯಕತ್ವ ಬದಲಾವಣೆʼ ವಿಚಾರವಾಗಿಯೆ ಬಿಸಿಬಿಸಿ ಚರ್ಚೆಗಳು ಆರಂಭಗೊಂಡಿದೆ. ಅಧಿವೇಶನದ ಮೊದಲ ದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಮತ್ತೊಮ್ಮೆ ʻಪೂರ್ಣಾವಧಿ ಮುಖ್ಯಮಂತ್ರಿʼ ಬಾಂಬ್ ಸಿಡಿಸಿದ್ದಾರೆ. ನಾಯಕತ್ವ ಅಥವಾ ಮುಖ್ಯಮಂತ್ರಿ ಬದಲಾವಣೆ ಸದ್ಯಕ್ಕೆ ಇಲ್ಲ ಎಂಬ ಸಂದೇಶವನ್ನು ಹೈಕಮಾಂಡ್ ರವಾನಿಸಿದೆ ಎಂಬ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹೌದು ! ಕಾಂಗ್ರೆಸ್ನಲ್ಲಿ ಗೊಂದಲ ಇತ್ತು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಮಗೊಂದು ಅವಕಾಶ ಕೊಡಿ ಎಂದು ಕೇಳಿದ್ದರು. ಅದರೆ, ನಾಯಕತ್ವ ಬದಲಾವಣೆ ಸದ್ಯಕ್ಕೆ ಇಲ್ಲ ಎಂದು ಹೈಕಮಾಂಡ್ ತಿಳಿಸಿದೆ. ಅಂದ ಮೇಲೆ ಸಿದ್ದರಾಮಯ್ಯ ಅವರು ಐದು ವರ್ಷ ಪೂರ್ಣ ಸಿಎಂ ಆಗಿ ಇರುತ್ತಾರೆ ಎಂದರ್ಥವಲ್ಲವೇ ? ಎಂದು ಮಾಧ್ಯಮದವರಿಗೆ ಡಾ. ಯತೀಂದ್ರ ಮರು ಪ್ರಶ್ನೆ ಹಾಕಿದ್ದಾರೆ.
ʻಕಾಂಗ್ರೆಸ್ನಲ್ಲಿ ಅಧಿಕಾರಕ್ಕಾಗಿ ಯಾವುದೇ ಕಿತ್ತಾಟ ನಡೆದಿಲ್ಲ. ಇದೆಲ್ಲ ಪ್ರತಿಪಕ್ಷದವರ ಸೃಷ್ಟಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಸಿಎಂ ಬದಲಾಗುತ್ತಾರೆಂದು ಹೇಳುತ್ತಿದ್ದಾರೆ. ಆದರೆ ಸಿಎಂ ಬದಲಾಗುತ್ತಾರೆ ಎಂಬ ಕನಸು ಕಾಣಬೇಕಷ್ಟೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ೫ ವರ್ಷ ಪೂರೈಸುತ್ತಾರೆ ಎಂಬ ನಂಬಿಕೆ ವೈಯಕ್ತಿಕವಾಗಿ ನನಗಿದೆʼ
– ಡಾ. ಯತೀಂದ್ರ ಸಿದ್ದರಾಮಯ್ಯ
ʻಕಾಂಗ್ರೆಸ್ನಲ್ಲಿ ಅಧಿಕಾರಕ್ಕಾಗಿ ಯಾವುದೇ ಕಿತ್ತಾಟ ನಡೆದಿಲ್ಲ. ಇದೆಲ್ಲ ಪ್ರತಿಪಕ್ಷದವರ ಸೃಷ್ಟಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಸಿಎಂ ಬದಲಾಗುತ್ತಾರೆಂದು ಹೇಳುತ್ತಿದ್ದಾರೆ. ಆದರೆ ಸಿಎಂ ಬದಲಾಗುತ್ತಾರೆ ಎಂಬ ಕನಸು ಕಾಣಬೇಕಷ್ಟೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ೫ ವರ್ಷ ಪೂರೈಸುತ್ತಾರೆ ಎಂಬ ನಂಬಿಕೆ ವೈಯಕ್ತಿಕವಾಗಿ ನನಗಿದೆ ಎಂದಿದ್ದಾರೆ. ಅಲ್ಲದೆ, ದೆಹಲಿ ಮಟ್ಟದಲ್ಲಿ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಸಿಎಂ ಸಿದ್ದರಾಮಯ್ಯರನ್ನು ಹೈಕಮಾಂಡ್ ದೆಹಲಿಗೆ ಕರೆದಿಲ್ಲ. ಶಾಸಕಾಂಗ ಸಭೆ ನಡೆದು ಮುಖ್ಯಮಂತ್ರಿ ಆಯ್ಕೆ ಮಾಡುವಾಗಲೂ ಕಾಲಮಿತಿ ನಿಗಧಿ ಪಡಿಸಿಲ್ಲ. ಅಂದ ಮೇಲೆ ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿ ಆಗಿರಬೇಕಲ್ಲವೇ ಎಂದು ತಿಳಿಸಿದರು.
ಅವಿಶ್ವಾಸ ಮಂಡಿಸುವ ಸಾಮರ್ಥ್ಯ ಬಿಜೆಪಿಗೆ ಇಲ್ಲ:
ನಮ್ಮದು ಬಹುಮತದ ಸರಕಾರ. ಅವರು ಅವಿಶ್ವಾಸ ಮತಕ್ಕೆ ಕೈಹಾಕಿದರೆ ಮುಖಭಂಗ ಎದುರಿಸುತ್ತಾರೆ. ಅವರಿಗೆ ಆ ಸಾಮರ್ಥ್ಯ ಇಲ್ಲ. ಸುಖಾ ಸುಮ್ಮನೆ ರಾಜಕೀಯ ಮಾಡುತ್ತಿದ್ದಾರೆ. ಇದನ್ನೆಲ್ಲ ಬಿಟ್ಟು ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡೋಣ. ಸಿಕ್ಕಿರುವ ಸಮಯವನ್ನು ಸದುಪಯೋಗ ಪಡಿಸಿಕೊಳ್ಳುತ್ತಾರೋ, ಸಮಯ ವ್ಯರ್ಥ ಮಾಡುತ್ತಾರೋ ನೋಡೋಣ. ಶನಿವಾರ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ರಹಸ್ಯ ಸಭೆ ನಡೆಸಿರುವ ಬಗ್ಗೆ ಮಾಧ್ಯಮಗಳಲ್ಲಿ ಆಗಿರುವ ವರದಿ ಹಿನ್ನಲ್ಲೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಕರ್ನಾಟಕದ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ೧೫ ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ.
ಸಿಎಂ ಪುತ್ರ ಹೇಳಿಕೆ ಅಧಿಕೃತ :
ಬೆಳಗಾವಿ: ನಾಯಕತ್ವ ಬದಲಾವಣೆ ಕುರಿತು ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿರುವ ಹೇಳಿಕೆ ಅಧಿಕೃತ ಎಂದು ಬಿಜೆಪಿಯ ಉಚ್ಛಾಟಿತ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.


