ಬೆಂಗಳೂರು: ಕಳೆದ ಮೂರು ವರ್ಷಗಳ ಕಾಲ ವಿಧಾನಸಭಾ ಸಭಾಪತಿಯಾಗಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿ, ಸರಳ ಸಜ್ಜನಿಕೆಗೆ ಹೆಸರಾದ ಯು.ಟಿ. ಖಾದರ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರೂ ಸೇರಿದಂತೆ 13 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಈ ಪೈಕಿ ಪ್ರಮುಖವಾಗಿ ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ರಾಮಲಿಂಗಲಿಂಗಾ ರೆಡ್ಡಿ, ಕೆ.ಎಚ್. ಮುನಿಯಪ್ಪ, ಈಶ್ವರ ಖಂಡ್ರೆ, ಭೈರತಿ ಸುರೇಶ್, ಶರಣ ಪ್ರಕಾಶ ಪಾಟೀಲ್, ಸತೀಶ್ ಜಾರಕಿಹೊಳಿ, ಕೃಷ್ಣಭೈರೇಗೌಡ, ಡಾ. ಯತೀಂದ್ರ ಸಿದ್ದರಾಮಯ್ಯ, ಡಾ. ಜಿ. ಪರಮೇಶ್ಚರ್, ಪ್ರಿಯಾಂಕ ಖರ್ಗೆ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.


