ಭಾರತದ ಪ್ರಜೆಗಳಾದ ನಾವು,
ಭಾರತವನ್ನು ಸಾರ್ವಭೌಮ, ಸಮಾಜವಾದಿ, ಧರ್ಮನಿರಪೇಕ್ಷ
ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ
ರೂಪಿಸುವುದಕ್ಕಾಗಿ,
ಭಾರತದ ಎಲ್ಲ ಪ್ರಜೆಗಳಿಗೆ
ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು,
ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು
ಉಪಾಸನೆಯ ಸ್ವಾತಂತ್ರ್ಯವನ್ನು
ಸ್ಥಾನಮಾನ ಮತ್ತು ಅವಕಾಶಗಳ ಸವiತೆಯನ್ನು
ದೊರೆಯುವಂತೆ ಮಾಡುವುದಕ್ಕಾಗಿ,
ವ್ಯಕ್ತಿ ಗೌರವ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲಿ
ಭ್ರಾತೃತ್ವ ಭಾವನೆಯನ್ನು ಮೂಡಿಸುವುದಕ್ಕೆ
ದೃಢಸಂಕಲ್ಪ ಮಾಡಿ,
ನಮ್ಮ ಸಂವಿಧಾನ ಸಭೆಯಲ್ಲಿ
1949ನೇ ಇಸವಿಯ ನವೆಂಬರ್ 26ನೇ ದಿನದಂದು
ಈ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡು,
ಅಂಗೀಕರಿಸಿ, ಶಾಸಹವಾಗಿ ವಿಧಿಸಿಕೊಂಡಿದ್ದೇವೆ


